ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ Siddaramaiah ಅವರು ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕರಾದ ವಿಶ್ವಗುರು ಬಸವಣ್ಣರವರ ಭಾವಚಿತ್ರವನ್ನು ಅನಾವರಣಗೊಳಿಸಿದರು.
ವಿಧಾನಸಭಾ ಅಧ್ಯಕ್ಷರಾದ ಶ್ರೀ ಯುಟಿ. ಖಾದರ್, ವಿಧಾನ ಪರಿಷತ್ ಸಭಾ ಪತಿಗಳಾದ ಶ್ರೀ ಬಸವರಾಜ್ ಹೊರಟ್ಟಿ ಸೇರಿದಂತೆ ಸಚಿವ ಸಂಪುಟದ ಸಹೋದ್ಯೋಗಿಗಳು, ಶಾಸಕರು ಉಪಸ್ಥಿತರಿದ್ದರು.