ವಿಜಯಪುರ :2024 ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಬಿ ಫಾರ್ಮ್ ನನಗೆ ಸಿಗುತ್ತದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಬಿ ಫಾರ್ಮ್ ನನಗೆ ಸಿಗುವ ವಿಶ್ವಾಸ ಇದೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ. ಈಗಲೇ ಬಿ ಫಾರ್ಮ್ ನೀಡಿದ್ರೂ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರು. ಅಲ್ಲದೇ, ವಿಜಯಪುರ ಏರ್ಪೋರ್ಟ್ ಕ್ರೆಡಿಟ್ ನನಗೆ ಸಲ್ಲಬೇಕು. ಅದರಲ್ಲಿ ಎರಡು ಮಾತಿಲ್ಲ. ಈ ವಿಮಾನ ನಿಲ್ದಾಣಕ್ಕೆ ಹಲವಾರು ಬಾರಿ ಪತ್ರ ಬರೆದು ಅನುದಾನ ತಂದವನು ನಾನು. ಹೀಗಾಗಿ ವಿಜಯಪುರದಲ್ಲಿ ವಿಮಾನ ನಿಲ್ದಾಣದ ಕ್ರೆಡಿಟ್ ನನಗೆ ಸಲ್ಲಬೇಕು ಎಂದರು.