ಕರ್ನಾಟಕ : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.
ಈ ಸಂಬಂಧ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಡೈರೆಕ್ಟರೇಟ್ ಆಫಿ ಸಿವಿಲ್ ರೈಟ್ಸ್ ಎನ್ಫೋರ್ಸಮೆಂಟ್ ಎಸ್ಪಿಯಾಗಿದ್ದಂತ ಜಿ.ಸಂಗೀತಾ ಅವರನ್ನು ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಿದೆ.
ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಂತ ಲೋಕೇಶ್ ಭರಮಪ್ಪ ಜಗಲಾಸರ್ ಅವರನ್ನು ಮೈಸೂರಿನ ಪೊಲೀಸ್ ಅಕಾಡೆಮಿಯ ನಿರ್ದೇಶಕರನ್ನಾಗಿ ನಿಯೋಜಿಸಿದೆ.
ಇನ್ನೂ ಹುಬ್ಬಳ್ಳಿ-ಧಾರವಾಡ ನಗರದ ಕ್ರೈಂ ಹಾಗೂ ಸಂಚಾರ ಡಿಸಿಪಿಯಾಗಿದ್ದಂತ ಗೋಪಾಲ್ ಎಂ ಬೈಕೋಡ್ ಅವರನ್ನು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ವರ್ಗಾವಣೆ ಮಾಡಿದೆ.
ನಿನ್ನೆಯಷ್ಟೇ ಐಪಿಎಸ್ ಅಧಿಕಾರಿ ಅಜಯ್ ಹೀಲೋರಿಯನ್ನು ಡೈರೆಕ್ಟರೇಟ್ ಆಫ್ ಸಿವಿಲ್ ರೈಟ್ಸ್ ಎನ್ಫೋರ್ಸ್ ಮೆಂಟ್ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿತ್ತು. ಈ ಹುದ್ದೆಯಲ್ಲಿದ್ದಂತ ಐಪಿಎಸ್ ಅಧಿಕಾರಿ ಸಂಗೀತಾ ಅವರನ್ನು ಇಂದು ಯಾದಗಿರಿ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ.