ವಿಜಯಪುರ: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ವಿಲಾಸಬಾಬು ಆಲಮೆಲ್ಕರ್ ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ.
ವಿಜಯಪುರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಾಜಿ ಶಾಸಕ ವಿಲಾಸಬಾಬು ಆಲಮೇಲಕರ(64) ನಿಧನರಾಗಿದ್ದಾರೆ. ಪತ್ನಿ, ಮೂವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಜಿಲ್ಲೆಯ ಬಳ್ಳೋಳ್ಳಿ ವಿಧಾನಸಭಾ ಕ್ಷೇತ್ರದಿಂದ 1998 ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಗೆದ್ದು ಶಾಸಕರಾಗಿದ್ದರು.
ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದ ವಿಲಾಸಬಾಬು ರವರ ನಿಧನಕ್ಕೆ ಸ್ಥಳಿಯ ಜನಪ್ರತಿಗಳು ಗಣ್ಯರ, ಮಠಾಧೀಶರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.