ಕರ್ನಾಟಕ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಬಸ್ಗಳಲ್ಲಿ ಈಗ ಸಾರಿಗೆ ಇಲಾಖೆಯಿಂದ ಬಸ್ಗಳಲ್ಲಿ ಯುಪಿಐ ಸ್ಕ್ಯಾನ್ ಕೋಡ್ ಮೂಲಕ ಟಿಕೆಟ್ ಖರೀದಿಗೆ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ, ಇನ್ನುಮುಂದೆ ಟಿಕೆಟ್ಗಾಗಿ ನಗದು ಹಣ, ಚಿಲ್ಲರೆ ಇಟ್ಟುಕೊಂಡು ಹೋಗುವ ಅಗತ್ಯವೇ ಇಲ್ಲ. ಆದರೆ, ನಗದು ಹಣವಿಲ್ಲದವರು ಆನ್ಲೈನ್ ಪೇಮೆಂಟ್ ಆಪ್ ಹೊಂದಿರಬೇಕು.
ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಟಿಕೆಟ್ ಪಡೆಯಲು ಸಾರಿಗೆ ಇಲಾಖೆ ಇನ್ನಷ್ಟು ಅನುಕೂಲ ಮಾಡಿಕೊಡಲಾಗಿದೆ. ಇನ್ಮುಂದೆ ನಿಮ್ಮ ಮೊಬೈಲ್ ನಲ್ಲಿ UPI ಪೇಮೆಂಟ್ ಅವಕಾಶ ಇದ್ದರೆ ಸಾಕು ಬಸ್ನಲ್ಲಿ ಟಿಕೆಟ್ ಪಡೆಯಬಹುದು. UPI ಕೋಡ್ ಸ್ಕ್ಯಾನ್ ಮಾಡಿ ಟಿಕೆಟ್ ಪಡೆಯಲು ಅವಕಾಶ ನೀಡಲಾಗಿದೆ. ಪ್ರಯೋಗಿಕವಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಆರಂಭ ಮಾಡಲಾಗಿದೆ. ಪೋನ್ ಪೇ, ಗೂಗಲ್ ಪೇ ಸೇರಿದಂತೆ UPI ಮೂಲಕ ಪೇಮೆಂಟ್ ಗೆ ಅವಕಾಶ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಬಿಎಂಟಿಸಿ, ಕೆಎಸ್ಆರ್ಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೂ ವಿಸ್ತರಿಸಲು ಚಿಂತನೆ ಮಾಡಲಾಗಿದೆ.