ಬೆಂಗಳೂರು: ಡೆಂಗ್ಯೂ ರೋಗ ಅಪಾಯಕಾರಿ ರೋಗವಾಗಿದ್ದು, ನಿರ್ಲಕ್ಷಿಸಿದರೇ ಸಾವು ಕಟ್ಟಿಟ್ಟಬುತ್ತಿ. ಈ ವರ್ಷವೂ ರಾಜ್ಯದಲ್ಲಿ ಡೆಂಗ್ಯೂ ಮತ್ತು ಮಲೇರಿಯಾ ರೋಗಿಗಳ ಸಂಖ್ಯೆ ಏರಿಕೆಯಾಗಿದೆ. ರಾಜ್ಯ ರಾಜಧಾನಿಯಲ್ಲೂ ಕೂಡ ಡೆಂಗ್ಯೂ, ಮಲೇರಿಯಾ ಪ್ರಕರಣಗಳು ಏರಿಕೆಯಾಗಿವೆ. ಜುಲೈ 1ರಿಂದ ಜುಲೈ 30ರ ವರೆಗೆ ಬೆಂಗಳೂರು ನಗರದಲ್ಲಿ ಬರೋಬ್ಬರಿ 1,649 ಪ್ರಕರಣ ದಾಖಲಾಗಿದೆ.
ಆಗಷ್ಟ ತಿಂಗಳಲ್ಲಿ ಸ್ವಲ್ಪ ಮಟ್ಟಿಗೆ ಕಡಿಮೆ ಆಗಿದ್ದ ಡೆಂಗ್ಯೂ ಪ್ರಕರಣಗಳು, ಮೊನ್ನೆ ಸುರಿದ ಮಳೆಯಿಂದ ಮತ್ತೆ ಹೆಚ್ಚಳವಾಗಿವೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಈ ಬಾರಿ ಶೇ 22 ರಷ್ಟು ಡೆಂಗ್ಯೂ ರೋಗಿಗಳ ಸಂಖ್ಯೆ ಏರಿಕೆಯಾಗಿದೆ.
- ಡೆಂಗ್ಯೂ ರೋಗದ ಲಕ್ಷಣಗಳು..
ಕೀಲು ನೋವು, ಸ್ನಾಯು ನೋವು, ಕೆಳಹೊಟ್ಟೆಯಲ್ಲಿ ನೋವು, ವಾಂತಿ ಅಥವಾ ಮಲದಲ್ಲಿ ರಕ್ತ, ತ್ವಚೆಯ ಮೇಲೆ ಸಣ್ಣ ಕೆಂಪು ಚುಕ್ಕೆಗಳು, ಪದೇ ಪದೇ ಜ್ವರ ಮರುಕಳಿಸುವುದು, ಜ್ವರದ ತಾಪಮಾನವು 104 ಡಿಗ್ರಿವರೆಗೆ ಏರುವುದು, ಮೈ-ಕೈ ನೋವು ಮತ್ತು ಸ್ನಾಯುಗಳ ಸೆಳೆತ ಎಲ್ಲವೂ ಡೆಂಗ್ಯೂ ರೋಗದ ಲಕ್ಷಣಗಳು. ಇನ್ನು ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ಹಿನ್ನೆಲೆಯಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.