- ಭೀಮಾತೀರದ ನದಿಯಲ್ಲಿ ವ್ಯಕ್ತಿಯ ಶವ ಪತ್ತೆ
ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಧೂಳಖೇಡ ಗ್ರಾಮದ ಬಳಿಯ ನದಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು. ಕಪನಿಂಬರಗಿ ಗ್ರಾಮದ ಶಾಂತಯ್ಯ ಹಿರೇಮಠ ಎಂದು ಗುರುತಿಸಲಾಗಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಪೊಲೀಸ ತನಿಖೆ ಬಳಿಕ ತಿಳಿದುಬರಬೇಕಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಝಳಕಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.