ರಾಜಸ್ಥಾನದ : ಭಿಲ್ವಾರಾ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳು ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಆರೋಪಿಗಳು ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ನಂತರ ಥಳಿಸಿ, ಆಕೆಯ ಬಟ್ಟೆಗಳನ್ನು ಬಿಚ್ಚಿಟ್ಟಿದ್ದಾರೆ. ಬೆತ್ತಲೆ ಮಹಿಳೆಯೊಬ್ಬರು ಸಹಾಯ ಕೇಳುತ್ತಿರುವ ಬಗ್ಗೆ ಸ್ಥಳೀಯರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದು, ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಠಾಣೆಗೆ ಕರೆದೊಯ್ದಿದ್ದಾರೆ.
ಗಂಗಾಪುರ ಎಸ್.ಹೆಚ್.ಒ. ನರೇಂದ್ರ ಜೈನ್ ಅವರ ಪ್ರಕಾರ, ಇಬ್ಬರು ಆರೋಪಿಗಳಲ್ಲಿ ಒಬ್ಬ ವ್ಯಕ್ತಿ ವಿವಾಹಿತೆಯನ್ನು ಜಿಲ್ಲೆಯ ನಿರ್ದಿಷ್ಟ ಸ್ಥಳಕ್ಕೆ ಕರೆದು ಅಲ್ಲಿಂದ ಅಮ್ಲಿ ರಸ್ತೆಯಲ್ಲಿರುವ ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.