ವಿಜಯಪುರ: ಗಾಂಧಿ ಕುಟುಂಬ ಹಾಗೂ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್.
ರಾಜೀವ ಗಾಂಧಿ ಹಾಗೂ ಅವರ ಕುಟುಂಬದ ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿಜಯಪುರ ನಗರದಲ್ಲಿ ವಾಗ್ದಾಳಿ ನಡೆಸಿದರು. ಡಾ. ಬಿ.ಆರ್. ಅಂಬೇಡ್ಕರ್ ನಿಧನ ವೇಳೆ ಅಂತ್ಯಕ್ರಿಯೆ ಜಮೀನು ನೀಡಿಲ್ಲ. ರಾಜೀವ ಗಾಂಧಿ, ಸಂಜಯ ಗಾಂಧಿ, ಇಂದಿರಾ ಗಾಂಧಿ, ನೆಹರು ಸಾವಿರಾರು ಎಕರೆ ಜಮೀನು ಇಟ್ಟುಕೊಂಡಿದ್ದಾರೆ. ಆದ್ರೇ, ಅಂಬೇಡ್ಕರ್ ಅವರ ಅಂತ್ಯಕ್ರಿಯೆ ಒಂದು ಎಕರೆ ಭೂಮಿ ನೀಡಲಿಲ್ಲ ಎಂದು ವಾಗ್ದಾಳಿ ನಡೆಸಿದರು. ಸಂವಿಧಾನವನ್ನು ಅವರ ಇಚ್ಛೆಯಂತೆ ಬರೆಯಲು ಕಾಂಗ್ರೆಸ್ ಅವಕಾಶ ನೀಡಿಲ್ಲ. ಅಂಬೇಡ್ಕರ್ಗೆ ಕಾಂಗ್ರೆಸ್ ಭಾರತ ರತ್ನ ಕೊಡಲಿಲ್ಲ. ರಾಜೀವ ಗಾಂಧಿ ಭಾಷಣದಲ್ಲಿ ಕಾಲಕಾಲಕ್ಕೆ ಸಂವಿಧಾನ ತಿದ್ದುಪಡಿ ಮಾಡಬೇಕು ಎಂದಿದ್ದಾರೆ. ಕಾಂಗ್ರೆಸ್ ನವರು ತಮ್ಮ ಸ್ವಾರ್ಥಕ್ಕೆ ಎಷ್ಟು ಸಲ ಸಂವಿಧಾನ ಬದಲಾವಣೆ ಮಾಡಿದ್ದಾರೆ. ಆದ್ರೇ, ಬಿಜೆಪಿ ಯಾವತ್ತು ಹಾಗೇ ಮಾಡಿಲ್ಲ. ಸಿಎಂ ಬೊಮ್ಮಾಯಿ ಸರ್ಕಾರದಲ್ಲಿ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಎಲ್ಲರಿಗೂ ಮೀಸಲಾತಿ ಹೆಚ್ಚಳ ಮಾಡಲಾಗಿದೆ ಎಂದರು.