ಮಂಡ್ಯ : 63 ವರ್ಷದ ವೃದ್ಧನೋರ್ವ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದಲ್ಲಿ ಜರುಗಿದೆ. ಈ ಹಿನ್ನೆಲೆ ಮದ್ದೂರು ಪೊಲೀಸರು ವೃದ್ಧ ರಾಜು ಎಂಬಾತನನ್ನು ಅರೆಸ್ಟ್ ಮಾಡಿದ್ದಾರೆ.
ಸೀಮಂತ ಕಾರ್ಯಕ್ರಮಕ್ಕೆ ಬಂದಿದ್ದ 8 ವರ್ಷದ ಅಪ್ರಾಪ್ತ ಬಾಲಕಿಯನ್ನು ರಾಜ ಪುಸಲಾಯಿಸಿ ಗ್ರಾಮದ ಹತ್ತಿರದ ಕಬ್ಬಿನ ಗದ್ದೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ್ದನು. ಬಾಲಕಿಯ ಪೋಷಕರು ನೀಡಿದ ದೂರಿನನ್ವಯ ಪೊಲೀಸರು ಆರೋಪಿ ರಾಜನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು ಮಾಡಿಕೊಂಡ ನಂತರ ಮಂಡ್ಯ ಸೆಷನ್ ನ್ಯಾಯಾಲಯದಲ್ಲಿ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.