ಗೋರಖ್ಪುರ: ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಪತ್ನಿಯ ಮೇಲೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ ಕೆಲವೇ ಗಂಟೆಗಳಲ್ಲಿ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಭಯಾನಕ ಘಟನೆ ನಡೆದಿದೆ.

ಪೊಲೀಸರ ಪ್ರಕಾರ, ಆರೋಪಿಗಳಾದ ಆದರ್ಶ್ (25) ಮತ್ತು ತ್ರಿಲೋಕಿ (45) ಎಂಬುವರು ಕಿಶೋರ್ (30) ಅವರ ಪತ್ನಿ 27 ವರ್ಷದ ರಶ್ಮಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.
ಇದಾದ ಕೆಲವೇ ಗಂಟೆಗಳಲ್ಲಿ ಅಂದ್ರೆ, ಗುರುವಾರ ಬೆಳ್ಳಂಬೆಳಗ್ಗೆ ವಿಷ ಸೇವಿಸಿದ್ದಾರೆ. ಕಿಶೋರ್ ಅದೇ ದಿನ ಮೃತಪಟ್ಟರೆ, ಪತ್ನಿ ಶುಕ್ರವಾರ ಗೋರಖ್ಪುರದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸ್ಥಳೀಯರ ಪ್ರಕಾರ, ಆರೋಪಿಗಳು ಮಹಿಳೆ ಮೇಲೆ ಅತ್ಯಾಚಾರವೆಸಗಿದ ನಂತ್ರ ದಂಪತಿಗಳಿಗೆ ಬಲವಂತವಾಗಿ ಉಣಿಸಿದ್ದಾರೆ ಎಂದು ಹೇಳಿದ್ದಾರೆ. ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದ್ದು, ಎಫ್ಐಆರ್ ದಾಖಲಿಸಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

