ಬೆಂಗಳೂರು: ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಧ್ಯತೆ ಇದ್ದು, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಗೆ ರಾಜ್ಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಹವಾಮಾನ್ ಇಲಾಖೆ, ದಕ್ಷಿಣ ಕನ್ನಡ (Dakshina kannada), ಉಡುಪಿ (Udupi), ಉತ್ತರ ಕನ್ನಡ (Uttara Kannada), ಬೀದರ್ (Bidar), ಕಲಬುರಗಿ (Kalaburagi), ವಿಜಯಪುರ (vijayapur), ಬೆಳಗಾವಿ (Belagavi), ಯಾದಗಿರಿ (yadagiri), ಚಿಕ್ಕಮಗಳೂರು Chikkamagalur), ಕೊಡಗು (Kodagu) ಹಾಗೂ ಕೋಲಾರ (Kolar) ಜಿಲ್ಲೆ ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದ್ದು, ಇಂದು ಮತ್ತು ನಾಳೆ ಯಲ್ಲೋ ಅಲರ್ಟ್ ಘೋಷಿಸಿದೆ.
ಮುಂದಿನ 24 ಗಂಟೆಗಳು ಕರಾವಳಿಯ ಬಹುತೇಕ ಕಡೆಗಳಲ್ಲಿ, ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. 45-55 ಕಿಮೀ ವೇಗದಲ್ಲಿ 65 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಅಲ್ಲದೆ, ಮುಂದಿನ 24 ಗಂಟೆಗಳು ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಒಂದೆರಡು ಕಡೆಗಳಲ್ಲಿ ಹಗುರ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ ಎಂದು ತಿಳಿಸಿದೆ.