ಶಿವಮೊಗ್ಗ: ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಪ್ರಚೋದನಕಾರಿ ಭಾಷಣ ಹಿನ್ನೆಲೆಯಲ್ಲಿ ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಸೊಮೊಟೊ ಪ್ರಕರಣ ದಾಖಲಾಗಿದೆ. ಸಿದ್ದರಾಮಯ್ಯನವರೇ ನಿಮ್ಮ ಮಗ ಯತೀಂದ್ರನನ್ನು ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದರೇ ನಿಮಗೆ ಏನನಿಸುತ್ತಿತ್ತು? ಡಿ.ಕೆ. ಶಿವಕುಮಾರ್ ಅವರೇ ನಿಮ್ಮ ಸಹೋದರ ಡಿ.ಕೆ. ಸುರೇಶ್ ರನ್ನು ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದರೆ ನಿಮಗೆ ಏನು ಅನಿಸುತ್ತಿತ್ತು? ಹಿಂದೂಗಳು ಮುಸ್ಲಿಮರ ಕೇರಿಗೆ ನುಗ್ಗಿದ್ದರೆ ಮಾರಿ ಜಾತ್ರೆಯಲ್ಲಿ ಕುರಿ ಕತ್ತರಿಸಿದಂತೆ ಕತ್ತರಿಸುತ್ತಿದ್ದರು ಎಂದು ಈಶ್ವರಪ್ಪ ಬಿಜೆಪಿ ಪ್ರತಿಭಟನೆ ವೇಳೆ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಕೇಸು ದಾಖಲಿಸಲಾಗಿದೆ ಎಂದು ಹೇಳಲಾಗಿದೆ.