India vs Bangladesh, ಏಕ ದಿನ ವಿಶ್ವಕಪ್2023: ಉಭಯ ತಂಡಗಳು ಏಕದಿನ ಕ್ರಿಕೆಟ್ನಲ್ಲಿ ಇದುವರೆಗೆ 41 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 32 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಬಾಂಗ್ಲಾದೇಶ್ ತಂಡ 8 ಬಾರಿ ಗೆಲುವು ಕಂಡಿದೆ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿತ್ತು.
ಏಕದಿನ ವಿಶ್ವಕಪ್ನ 17ನೇ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದ ಟಾಸ್ ಗೆದ್ದ ಬಾಂಗ್ಲಾದೇಶ್ ತಂಡದ ಹಂಗಾಮಿ ನಾಯಕ ನಜ್ಮುಲ್ ಹೊಸೈನ್ ಶಾಂಟೊ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡ ನಿಗದಿತ 50 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 256 ರನ್ ಕಲೆಹಾಕಿತು. ಈ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ (103) ಅಜೇಯ ಶತಕ ಬಾರಿಸಿ ಮಿಂಚಿದ್ದರು. ಈ ಶತಕದ ನೆರವಿನಿಂದ ಟೀಮ್ ಇಂಡಿಯಾ 41.3 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 261 ರನ್ಗಳಿಸಿ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.