ಕಲಬುರಗಿ : ಮಾರಕಾಸ್ತ್ರದಿಂದ ಕೊಚ್ಚಿ ಯುವಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸಿದನೂರು ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ.
ಬಲಭೀಮ್ ಸಗರ್(23) ಕೊಲೆಯಾದ ಯುವಕ. ಇನ್ನು ಬಲಭೀಮ ಈ ಹಿಂದೆ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿದ್ದು, ಕೆಲ ದಿನಗಳ ಹಿಂದಷ್ಟೇ ಜಾಮೀನಿನ ಮೇಲೆ ಹೊರಬಂದಿದ್ದ. ಹಳೇ ವೈಷಮ್ಯದ ಹಿನ್ನೆಲೆ ದುಷ್ಕರ್ಮಿಗಳು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ರೇವೂರು ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.