ಹಾಸನ : ‘ಚುನಾವಣಾ ರಾಜಕಾರಣದಲ್ಲಿ ಮುಂದುವರಿಯಬಾರದು ಎನ್ನುವ ಸಣ್ಣ ತೀರ್ಮಾನವನ್ನು ಮಾಡಿದ್ದೇನೆ’ ಎಂದು ಸಂಸದ ಡಿ.ವಿ. ಸದಾನಂದಗೌಡ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇಷ್ಟು ವರ್ಷ ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ಬಿ.ಎಸ್.ಯಡಿಯೂರಪ್ಪ ಅವರ ನಂತರ ನಾನೇ ಹೆಚ್ಚು ಅಧಿಕಾರ ಅನುಭವಿಸಿದ ವ್ಯಕ್ತಿ’ ಎಂದರು. ’10 ವರ್ಷ ಶಾಸಕ, 20 ವರ್ಷ ಸಂಸದ, 1 ವರ್ಷ ಮುಖ್ಯಮಂತ್ರಿ, 7 ವರ್ಷ ಕೇಂದ್ರ ಸಚಿವ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ, ಪ್ರತಿಪಕ್ಷದ ನಾಯಕ ಹೀಗೆ ಎಲ್ಲ ಅಧಿಕಾರವನ್ನು ಅನುಭವಿಸಿದ್ದೇನೆ. ಇನ್ನೂ ಮುಂದುವರಿದರೆ ಸ್ವಾರ್ಥಿ ಆಗುತ್ತೇನೆ’ ಎಂದು ಹೇಳಿದರು.