ಬೆಂಗಳೂರು :ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಬೆಂಗಳೂರು ಮೂಲದ ಯುವತಿಯೋರ್ವಳು ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ದೂರು ನೀಡಿದ್ದಾರೆ. ಈ ಸಂಬಂಧ ಪೊಲೀಸರು ಇಬ್ಬರಿಗೂ ನೋಟಿಸ್ ಜಾರಿ ಮಾಡಿದ್ದಾರೆ.
ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಯುವತಿ ಬಸವನಗುಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಒಂದೂವರೆ ವರ್ಷದ ಹಿಂದೆ ಯುವತಿಯನ್ನು ಪರಿಚಯ ಮಾಡಿಕೊಂಡು ಹೋಟೆಲ್ ವೊಂದರಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಯುವತಿ ದೂರು ನೀಡಿದ್ದಾರೆ.