“ನಮ್ಮ ಹೆಮ್ಮೆಯ ಜನಪದಕಲೆ ಉಳಿಸಿಬೆಳೆಸಬೇಕು”
ವಿಜಯಪುರ : ಜಾನಪದ ಕಲೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಿನ್ನೆ ಸಂಜೆ ವಿಜಯಪುರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದ ಆವರಣದಲ್ಲಿ ಆಯೋಜಿಸಲಾದ ಜನಪರಉತ್ಸವ ಉದ್ಘಾಟಿಸಿ ಮಾತನಾಡಿದ ಸಚಿವ ಎಂ ಬಿ ಪಾಟೀಲ್.
“ಭಾರತೀಯ ಸಂಸ್ಕೃತಿಯಲ್ಲಿ ಜನಪದ ಕಲೆ, ಜನಪದ ನಾಟಕ, ಜನಪದ ಸಂಗೀತ ಇವೆಲ್ಲವೂ ತಮ್ಮದೇ ಆದ ಸ್ಥಾನವನ್ನು ಪಡೆದುಕೊಂಡಿದೆ. ಸಾವಿರಾರು ವರ್ಷಗಳ ಇತಿಹಾಸವುಳ್ಳ ಈ ಕಲೆ ನಮ್ಮೆಲ್ಲರ ಹೆಮ್ಮೆಯದ್ದಾಗಿದ್ದು, ಉಳಿಸಿ ಬೆಳೆಸಬೇಕು, ಮುಂದಿನ ಪೀಳಿಗೆಗೂ ಇದು ಲಭ್ಯವಾಗಿರಬೇಕು. ಇದು ನಮ್ಮೆಲ್ಲರ ಗುರಿಯಾಗಿರಬೇಕು.”
ಈ ಸಂಧರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಟಿ. ಭೂಬಾಲನ್, ಜಿಪಂ CEO ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸೋನಾವಣೆ ಋಷಿಕೇಶ ಭಗವಾನ್, ಸೇರಿದಂತೆ ನಾನಾ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವಿವಿಧ ಜಾನಪದ ಕಲಾವಿದರು ತಮ್ಮ ಕಲೆಯನ್ನು ಪ್ರದರ್ಶಿಸಿ ಕಲಾಭಿಮಾನಿಗಳನ್ನು ರಂಜಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ ವಿಶೇಷ ಘಟಕ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.