ವಿಜಯಪುರ: ಜಿಲ್ಲಾಡಳಿತ ವತಿಯಿಂದ ಕೃಷಿ-ತೋಟಗಾರಿಕೆ ಉತ್ಪನ್ನಗಳ ಖರೀದಿದಾರ-ಮಾರಾಟಗಾರರ ಸಮಾವೇಶ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆಯುತ್ತಿದೆ.
ಸಮಗ್ರ ಕೃಷಿ ಬೇಸಾಯ ಪದ್ಧತಿ ಅಳವಡಿಸಿಕೊಳ್ಳಲು -ಜಿಲ್ಲಾಧಿಕಾರಿ ಟಿ. ಭೂಬಾಲನ್ ಕರೆ. ಕಾರ್ಯಕ್ರಮದಲ್ಲಿ ಜಂಟಿ ಕೃಷಿ ನಿರ್ದೇಶಕ ಡಾ. ವಿಲಿಯಂಸ್ ರಾಜಶೇಖರ, ತೋಟಗಾರಿಕೆ ಉಪ ನಿರ್ದೇಶಕ ಭಾವಿದೊಡ್ಡಿ ರಾಹುಲ್ ಕುಮಾರ, ಕೃಷಿ ಸಹಾಯಕ ನಿರ್ದೇಶಕ ರಾಘವೇಂದ್ರ ಬಗಲಿ, ಬಿಎಲ್ ಡಿಇ ಸಂಸ್ಥೆಯ ಕುಲಕರ್ಣಿ, ವ್ಹಿಜನ್ ಗ್ರೂಪ್ ಸ್ಪಾರ್ಟಅಪ್ ಚೇರಮನ್ ಪ್ರಶಾಂತ ಪ್ರಕಾಶ, ಮತ್ತಿತರರು ಉಪಸ್ಥಿತರಿದ್ದರು.