ಕಾಂಗ್ರೆಸ್ ಪಕ್ಷದ 50 ಶಾಸಕರು ರಾಜೀನಾಮೆ ಕೊಡಲು ರೆಡಿ ಇದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಸ್ಪೋಟಕ ಮಾಹಿತಿ ನೀಡಿದ್ದಾರೆ.
ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ಐವತ್ತು 50 ಶಾಸಕರು ರಾಜೀನಾಮೆ ನೀಡಿ ಬರಲು ಸಿದ್ಧರಿದ್ದಾರೆ. ಸದ್ಯ ಕಾಂಗ್ರೆಸ್ ಸರ್ಕಾರ ಕೋಮಾ ಸ್ಥಿತಿಯಲ್ಲಿದೆ. ಒಂದೂ ಹೊಸ ಯೋಜನೆ ಜಾರಿಗೊಳಿಸಿಲ್ಲ. ಬಿಟ್ಟಿ ಭಾಗ್ಯಗಳ ಹಿಂದೆ ಬಿದ್ದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.