ವಿಜಯಪುರ : ಎರಡು ಬಸ್ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಹಲವು ಪ್ರಯಾಣಿಕರು ಗಂಭೀರ ಗಾಯ ಹೊಂದಿರುವ ಘಟನೆ ವಿಜಯಪುರ ತಾಲ್ಲೂಕಿನ ಕವಲಗಿ ಗ್ರಾಮದ ಬಳಿ ನಡೆದಿದೆ.
ಸಿಂದಗಿ ಮಾರ್ಗವಾಗಿ ವಿಜಯಪುರಕ್ಕೆ ಬರುತ್ತಿದ್ದ ಬಸ್ ಹಾಗೂ ವಿಜಯಪುರದಿಂದ ಸಿಂದಗಿಗೆ ಹೋಗುತ್ತಿದ್ದ ಬಸ್ ನಡುವೆ ಡಿಕ್ಕಿಯಾಗಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರ ಗಾಯಹೊಂಡಿದ್ದಾರೆ, ಕೆಲವರು ಮೃತ ಪಟ್ಟಿದ್ದಾರೆ. ಗಾಯಾಳುಗಳನ್ನ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.