ವಿಜಯಪುರ : ಮಹಾನಗರಪಾಲಿಕೆ ಗೆ ನೂತನವಾಗಿ ಮೇಯರ್ ಆಗಿ ಆಯ್ಕೆಯಾಗಿರುವ ಕಾಂಗ್ರೆಸಿನ ಮಹೆಜಬೀನ್ ಅವರ ಪತಿ ಮಾಜಿ ಮಹಾನಗರ ಪಾಲಿಕೆ ಸದಸ್ಯ ಅಬ್ದುಲ್ ರಜಾಕ್ ಹೊರ್ತಿ, ಉಪಮೇಯರ್ ದಿನೇಶ್ ಹಳ್ಳಿ ಹಾಗೂ ಪಾಲಿಕೆಯ ಸದಸ್ಯರು, ಮುಖಂಡರಾದ ಅಬ್ದುಲ್ ಹಮೀದ್ ಮುಶ್ರೀಫ್ ಅವರು
ಬೆಂಗಳೂರಿನಲ್ಲಿ ಸಚಿವ ಎಂ ಬಿ ಪಾಟೀಲ್ ನಿವಾಸಕ್ಕೆ ಆಗಮಿಸಿ, ತಮ್ಮ ಗೆಲುವಿನ ಸಂತಸ ಹಂಚಿಕೊಂಡರು. ಈ ಸಂದರ್ಭದಲ್ಲಿ ಅವರಿಗೆ ಶುಭಹಾರೈಸಿ, ನಾಗರಿಕರ ಆಶೋತ್ತರಗಳಿಗೆ ಸ್ಪಂದಿಸಿ ಉತ್ತಮ ಆಡಳಿತ ನೀಡುವಂತೆ ಸಚಿವರು ಸಲಹೆ ನೀಡಿದರು.