ಕಳೆದ ಕೆಲವು ದಿನಗಳಿಂದ ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಹೇಳಿಕೆ ನೀಡುತ್ತಿರುವ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ
ಬಿಜೆಪಿಯ ಅಧ್ಯಕ್ಷ ಕೇಂದ್ರೀಯ ಶಿಸ್ತು ಸಮಿತಿಯು ಶೋಕಾಶ್ ನೋಟಿಸ್ ಜಾರಿ ಮಾಡಿದೆ. ಹತ್ತು ದಿನದ ಒಳಗೆ ನೋಟಿಸ್ ಗೆ ಉತ್ತರ ನೀಡಲು ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿ ಸೂಚಿಸಿದೆ. ಈ ವಿಚಾರವಾಗಿ ಮಾತನಾಡಿರುವ ಯತ್ನಾಳ್ ನನ್ನ ವಿರುದ್ಧ ಯಾವುದೇ ಕ್ರಮ ಕೈಗೊಂಡರು ನನ್ನ ತಕರಾರು ಇಲ್ಲ ಎಂದಿದ್ದಾರೆ. ಇದರ ಬೆನ್ನಲ್ಲೇ ಅವರು ನಿನ್ನೆ ದೆಹಲಿಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.