ದಿನೇ ದಿನೇ ವಿಷ ವಾಗುತ್ತಿದೆ ಕಾಂಗ್ರೆಸ್ ನ ಆಡಳಿತ. ಅಧಿಕಾರದ ಚುಕ್ಕಾಣಿ ಹಿಡಿಯಲು ದಿನವೂ ಸಾಹಸದ ಪಯಣ.
ಅಧಿಕಾರ ಹಂಚಿಕೆ ಸಂಬಂಧ ಒಪ್ಪಂದವಾಗಿದೆ ಎಂಬ ಡಿಕೆಶಿ ಹೇಳಿಕೆಗೆ ಬುಧವಾರ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ನಮ್ಮ ನಡುವೆ ಯಾವ ಒಪ್ಪಂದವೂ ಆಗಿಲ್ಲ. ಎಂದು ಮಾತು ಹರಿಸಿಕೊಂಡ ಸಿಎಂ ಸಿದ್ದರಾಮಯ್ಯ, ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇವೆ ಎಂದಿದ್ದರು. ಈಗ ಅಧಿಕಾರ ಹಂಚಿಕೆ ಒಪ್ಪಂದ ಹೇಳಿಕೆ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದು, ಒಪ್ಪಂದ ಆಗಿದೆ ಎಂದಾದರೆ ನಾವೆಲ್ಲರೂ ಯಾಕೆ ಇರಬೇಕು?
ಎಂದು ಬೇಸರದ ಭಾವ ದಿಂದ ಉತ್ತರಿಸಿದ್ದಾರೆ
ಅವರಿಬ್ಬರೇ ರಾಜಕಾರಣ ಮಾಡಿ, ಅವರಿಬ್ಬರೇ ನಡೆಸಿ ಬಿಡಲಿ. ಬೇರೆಯವರು ಇರುವುದೇ ಬೇಡವಾ ಎಂದು ಪ್ರಶ್ನಿಸಿದ್ದಾರೆ.