ವಿಜಯಪುರ: ಪಂಚಮಸಾಲಿ ಸಮಾಜದ ಶ್ರೀಗಳಿಗೆ ಅವಹೇಳನ ಕಾರಿಯಾಗಿ ಮಾತನಾಡಿರುವ ಹಿನ್ನಲೆ ಮಹಿಳೆಯ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ.
ವಿದ್ಯಾ ಪಾಟೀಲ ವಿರುದ್ಧ ಕೇಸ್ ದಾಖಲಾಗಿದೆ. ಅಲ್ಲದೇ, ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ವಿದ್ಯಾ ಪಾಟೀಲ ಮೂರು ದಿನಗಳ ಹಿಂದೆ ಅವಹೇಳನ ಹಾಗೂ ಅವಾಚ್ಯ ಶಬ್ದದಿಂದ ನಿಂದಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು, ಇನ್ನೂ ಪಂಚಮಸಾಲಿ ಸಮಾಜ ಹಾಗೂ ಶ್ರೀಗಳಿಗೆ ಅವಮಾನ ಹಿನ್ನೆಲೆ ಪಂಚಮಸಾಲಿ ಸಮಾಜದ ಮುಖಂಡ ಬಸವರಾಜ ಗೊಳಸಂಗಿ ದೂರು ನೀಡಿದ್ದಾರೆ. ಈ ಕುರಿತು ಬಸವನಬಾಗೇವಾಡಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.