ಬೆಂಗಳೂರು : ನಟ ಪ್ರಕಾಶ್ ರಾಜ್ ಗೆ ಜೀವ ಬೆದರಿಕೆ ವಿಡಿಯೋ ಪ್ರಸಾರ ಹಿನ್ನೆಲೆಯಲ್ಲಿ ವಿಕ್ರಮ್ ಯೂಟ್ಯೂಬ್ ಚಾನಲ್ ವಿರುದ್ಧ ಪ್ರಕಾಶ್ ರಾಜ್ ದೂರು ಸಲ್ಲಿಸಿದ್ದಾರೆ. ವಿಕ್ರಮ್ ಟಿವಿ ಹಾಗೂ ಮಾಲೀಕರ ವಿರುದ್ದ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಅರ್ ದಾಖಲಾಗಿದೆ.
ಬೆಂಗಳೂರಿನ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಐಪಿಸಿ ಸೆಕ್ಷನ್ 506, 504, 505(2) ಸೆಕ್ಷನ್ ಅಡಿಯಲ್ಲಿ ಮೊಕದ್ದಮೆ ದಾಖಲಾಗಿದ್ದು, ತನಿಖೆ ಮಾಡಲಾಗುತ್ತಿದೆ. ಯೂಟ್ಯೂಬ್ ಚಾನೆಲ್ನಲ್ಲಿ ಆಗಸ್ಟ್ 14ರಂದು ಜೀವ ಬೆದರಿಕೆ ಹಾಕುವ ಸಂದೇಶದ ರೀತಿಯಲ್ಲಿ ಸುದ್ದಿ ಪ್ರಸಾರ ಮಾಡಲಾಗಿತ್ತು. ಅಪ್ಲೋಡ್ ಮಾಡಿರುವ 2 ವಿಡಿಯೋಗಳಲ್ಲೂ ಬೆದರಿಕೆ ಹಾಕಲಾಗಿದೆ ಎಂದು ಪ್ರಕಾಶ್ ರಾಜ್ ಆರೋಪಿಸಿದ್ದಾರೆ.
ಪ್ರಕಾಶ್ ರಾಜ್ ಮಾತ್ರವಲ್ಲದೇ ಅವರ ಕುಟುಂಬದವರಿಗೂ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಯೂಟ್ಯೂಬ್ ವಾಹಿನಿ ವಿರುದ್ಧ ದೂರು ನೀಡಲಾಗಿದೆ. ವಿಕ್ರಮ್ ಯೂಟ್ಯೂಬ್ ಚಾನಲ್ ಮುಖ್ಯಸ್ಥ ವಿಕ್ರಮ್ ಹೆಗ್ಡೆ ಮೇಲೆ ಕೇಸ್ ಹಾಕಲಾಗಿದೆ. ಸಿಬ್ಬಂದಿ ವಿರುದ್ಧವೂ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಪ್ರಕಾಶ್ ರಾಜ್ ದೂರು ನೀಡಿದ್ದಾರೆ. ಅಶೋಕ ನಗರ ಠಾಣೆ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ.