ಕೋಲಾರ : ಜಿಲ್ಲೆಯ ಮುಳಬಾಗಿಲು ತಾಲೂಕಿನ ಹನುಮನಹಳ್ಳಿ ಟೋಲ್ನಲ್ಲಿ ಪೊಲೀಸ್ ವಾಹನಕ್ಕೆ ಲಾರಿಯೊಂದು ಡಿಕ್ಕಿ ಹೊಡೆದ ದುರಂತ ಘಟನೆಯೊಂದು ಬೆಳಕಿಗೆ ಬಂದಿದೆ.
ಕೋಲಾರ ಸಮೀಪ ಡಿವೈಎಸ್ಪಿ ಗೋಪಾಲ್ ನಾಯ್ಕ್ ಇದ್ದ ಜೀಪ್ಗೆ ನಿಯಂತ್ರಣ ತಪ್ಪಿ ಹಿಂಬದಿಯಿಂದ ಮರಳು ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದು ನುಜ್ಜುಗುಜ್ಜಾಗಿದೆ.
ತಕ್ಷಣ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ ಅಲ್ಲದೇ ಲಾರಿ ಪೊಲೀಸ್ ಜೀಪ್ಗೆ ಡಿಕ್ಕಿ ಹೊಡೆದ ದೃಶ್ಯಾವಳಿ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರ ಭೇಟಿ ಮಾಡಿ ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.