ಹಾಡಹಗಲೇ ವ್ಯಕ್ತಿಯ ಮೇಲೆ ಗುಂಡಿನ ದಾಳಿ ನಡೆದಿರುವ ಘಟನೆ ನಡೆದಿದೆ.
ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಅರಕೇರಿ ಎಲ್ ಟಿ ಹತ್ತಿರ ಇಂದು ನಡೆದಿದೆ. ಸತೀಶ ಪ್ರೇಮಸಿಂಗ್ ರಾಠೋಡ ಮೇಲೆ ಗುಂಡಿನ ದಾಳಿ ನಡೆದಿದ್ದು, ಶೂಟೌಟ್ನಲ್ಲಿ ಸತೀಶ ಹತ್ಯೆಯಾಗಿದ್ದಾನೆ. ಗುಂಡಿನ ದಾಳಿ ಮಾಡಿದ ಆರೋಪಿಗಳು ಪರಾರಿಯಾಗಿದ್ದು. ಸದ್ಯ ವಿಜಯಪುರ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

