- ಮಂಗಳೂರು: ದುಬಾೖಯಿಂದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಓರ್ವನನ್ನು ಬುಧವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಬಂದಿಳಿದ ಆರೋಪಿಯನ್ನು ತಪಾಸಣೆ ನಡೆಸಿದಾಗ ಆತ 61,42,500 ರೂ.
ಮೌಲ್ಯದ 1,050 ಗ್ರಾಂ ಚಿನ್ನವನ್ನು ಪೇಸ್ಟ್ ರೂಪಕ್ಕೆ ಪರಿವರ್ತಿಸಿ ಗುದದ್ವಾರದಲ್ಲಿ ಬಚ್ಚಿಟ್ಟು ಸಾಗಿಸಲು ಯತ್ನಿಸುತ್ತಿರುವುದು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.