ಗದಗ: ಕೇವಲ ಐದು ತಿಂಗಳ ಹಿಂದಷ್ಟೇ ಹೊಸ ಕನಸುಗಳೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಹೆಣ್ಮಗಳೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇದಕ್ಕೆ ಗಂಡನ ಮನೆಯವರು ಕಾರಣ ಎಂದು ಆರೋಪಿಗಳು ಕೇಳಿ ಬರುತ್ತಿವೆ.
ಗದಗ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಉಮಾ ವಿಷ್ಣು ಎಮ್ಮಿ (23) ಆತ್ಮಹತ್ಯೆಗೆ ಶರಣಾದ ದುರ್ದೈವಿ . ಮಂಗಳವಾರ ರಾತ್ರಿ ಬೆಡ್ ರೂಮ್ನಲ್ಲಿರುವ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ಬಗ್ಗೆ ಮಾಹಿತಿ ಪಡೆದು ಧಾವಿಸಿದ ಉಮಾಳ ಸಹೋದರ ಗದಗ ಗ್ರಾಮೀಣ ಠಾಣೆಯಲ್ಲಿ ದೂರು ನೀಡಿದ್ದಾನೆ.