ಹುಬ್ಬಳ್ಳಿ: ವಿಷ ಸೇವಿಸಿ ಎಎಸ್ಐ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಗುಡಗೇರಿಯಲ್ಲಿ ಘಟನೆ ನಡೆದಿದೆ. ಗುಡಗೇರಿ ಪೊಲೀಸ್ ಠಾಣೆಯ ಎಎಸ್ಐ ಬಸವರಾಜ ಪಾಯಣ್ಣವರ (54) ಮೃತ ದುರ್ದೈವಿ.
ರಾತ್ರಿಪಾಳಿ ಕೆಲಸ ಮುಗಿಸಿ ವಸತಿ ಗೃಹಕ್ಕೆ ಹೋಗಿದ್ದ ಬಸವರಾಜ, ವಸತಿ ಗೃಹದ ಆವರಣದ ದೇಗುಲದ ಬಳಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತೀವ್ರ ಕಾಲು ನೋವಿನಿಂದ ಬಳಲುತ್ತಿದ್ದ ಎಎಸ್ಐ ಬಸವರಾಜ, ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಗುಡಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಗುಡಗೇರಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.