ಮಂಗಳೂರು: ಕೆಟ್ಟು ನಿಂತಿದ್ದ ಲಾರಿಯಿಂದಾಗಿ ಆರು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ.
ಮಂಗಳೂರಿನಿಂದ ತೊಕ್ಕೊಟ್ಟಿಗೆ ತೆರಳುತ್ತಿದ್ದ ಸಂದರ್ಭ ಸೇತುವೆಯ ಮಧ್ಯಭಾಗದಲ್ಲಿ ಲಾರಿ ಕೆಟ್ಟು ನಿಂತಿತ್ತು. ಈ ವೇಳೆ ಜೋರಾಗಿ ಮಳೆ ಸುರಿದಿದ್ದು, ನಿಯಂತ್ರಣ ಕಳೆದುಕೊಂಡು ಲಾರಿಗೆ ಹಿಂಬದಿಯಿಂದ ಅಲ್ಟೋ ಕಾರೊಂದು ಲಾರಿಗೆ ಡಿಕ್ಕಿಯಾಗಿದೆ.
ಬಳಿಕ ಒಂದರ ಹಿಂದೆ ಇನ್ನೊಂದರಂತೆ ಆಲ್ಟೊ ಕಾರಿಗೆ ರಿಟ್ಝ್ ಕಾರು, ಕಾಂಟೆಸ್ಸಾ ಪಿಕಪ್ ಹಾಗೂ ಖಾಸಗಿ ಬಸ್ ಡಿಕ್ಕಿಯಾಗಿದೆ.
ಸರಣಿ ಅಪಘಾತದಿಂದಾಗಿ ಎರಡು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.