ಕಲಬುರ್ಗಿ : ಬಿಸಿಲುನಾಡು ಕಲಬುರಗಿಯಲ್ಲಿ ನಿನ್ನೆಯಿಂದ ಧಿಡೀರನೆ ಮಲೆನಾಡಿನಂತೆ ಬದಲಾಗಿದೆ. ಪರಿಣಾಮ ಸಿಡಿಲು ಬಡಿದು 11 ಮೇಕೆಗಳು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾಜೋಳ ಗ್ರಾಮದಲ್ಲಿ ನಡೆದಿದೆ. ಅದೇ ರೀತಿಯಾಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸಿದನೂರು ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ಮಹಿಳೆಯೋರ್ವಳು ಮೃತಪಟ್ಟಿದ್ದಾರೆ.


