ಆಂಧ್ರಪ್ರದೇಶ: ಗಣೇಶ ಹಬ್ಬದ ಸಂಭ್ರಮದಲ್ಲಿದ್ದ ಯುವಕನೊಬ್ಬ ಗಣೇಶ ಮೂರ್ತಿ ಪೆಂಡಾಲ್ ಬಳಿ ನೃತ್ಯ ಮಾಡುವ ವೇಳೆ ಹೃದಯಾಘಾತಗೊಂಡು ಮೃತಪಟ್ಟಿರುವ ಆಘಾತಕಾರಿ ಘಟನೆಯೊಂದು ನಡೆದಿದೆ.
ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಧರ್ಮವರಂನಲ್ಲಿ ಈ ದಾರುಣ ಘಟನೆ ನಡೆದಿದ್ದು, ಬುಧವಾರ ರಾತ್ರಿ ಗಣೇಶ ಮಂಟಪದಲ್ಲಿ ಪ್ರಸಾದ್ ಎಂಬ ಯುವಕ ಇತರ ಯುವಕರ ಜೊತೆ ಉತ್ಸಾಹದಿಂದ ಕುಣಿಯುತ್ತಿದ್ದ ಈ ವೇಳೆ ಯುವಕನಿಗೆ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾನೆ. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಲಿಲ್ಲ. ಆಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.