ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ನ ನೂತನ ಸದಸ್ಯರಾಗಿ ಉಮಾಶ್ರೀ, ಎಮ್. ಆರ್ ಸೀತಾರಾಮ್ ಮತ್ತು ಹೆಚ್.ಪಿ ಸುಧಾಂ ದಾಸ್ ಅವರು ಪ್ರಮಾಣವಚನ ಸ್ವೀಕರಿಸಿದರು.
ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಹೆಚ್.ಕೆ ಪಾಟೀಲ್, ಬೋಸರಾಜು ಸೇರಿದಂತೆ ಹಲವು ಶಾಸಕರುಗಳು, ನೂತನ ಶಾಸಕರುಗಳ ಕುಟುಂಬ ಸದಸ್ಯರು ಮತ್ತು ಅಭಿಮಾನಿಗಳ ಸಮ್ಮುಖದಲ್ಲಿ ಈ ಮೂವರು ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು.
ಕರ್ನಾಟಕ ವಿಧಾನ ಪರಿಷತ್ನ ನೂತನ ಸದಸ್ಯರಾಗಿ ಸೀತಾರಾಂ ಪ್ರಮಾಣ ವಚನ ಸ್ವೀಕಾರ
ನೂತನವಾಗಿ ಪರಿಷತ್ ಸದಸ್ಯರಾಗಿ ಆಯ್ಕೆ ಆದ ಎಂ.ಆರ್ ಸೀತಾರಾಮ್ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರೆ, ಉಮಾಶ್ರೀ ಸಂವಿಧಾನ ಹಾಗೂ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಹೆಚ್.ಪಿ. ಸುಧಾಂ ದಾಸ್ ಬುದ್ಧ ಬಸವ, ಅಂಬೇಡ್ಕರ್ ಹಾಗೂ ಭಗವಂತನ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.