ಬೆಂಗಳೂರು : ರಾಜ್ಯ ವಕ್ಫ್ ಬೋರ್ಡ್ನ ನೂತನ ಅಧ್ಯಕ್ಷರಾಗಿ ಅನ್ವರ್ ಬಾಷಾ ಶುಕ್ರವಾರ ನಗರದ ಕನ್ನಿಂಗ್ಹ್ಯಾಮ್ ರಸ್ತೆಯಲ್ಲಿರುವ ವಕ್ಫ್ ಬೋರ್ಡ್ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕ ರಿಝ್ವಾನ್ ಅರ್ಶದ್, ರಾಜ್ಯಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ.ಸೈಯದ್ ನಾಸಿರ್ ಹುಸೇನ್, ಮೌಲಾನ ಸೈಯದ್ ತನ್ವೀರ್ ಹಾಶ್ಮಿ, ಮೌಲಾನ ಮಕ್ಸೂದ್ ಇಮ್ರಾನ್ ರಶಾದಿ, ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಮೌಲಾನ ಎನ್.ಕೆ.ಎಂ.ಶಾಫಿ ಸಅದಿ, ವಕ್ಫ್ ಬೋರ್ಡ್ ಸಿಇಒ ಖಾನ್ ಪರ್ವೇಝ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.