ಒಡಿಶಾ: MLA ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ವಂಚನೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ ಬಂಧನವಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಅಭಿನವ ಹಾಲಶ್ರೀ, ಬಂಧನ ಭೀತಿ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿ ವಿಚಾರಣೆಯನ್ನು ಕೋರ್ಟ್ ಮುಂದೂಡಿತ್ತು. ಇದರ ಬೆನ್ನಲ್ಲೇ ಅಭಿನವ ಹಾಲಶ್ರೀಯನ್ನು ಒಡಿಶಾದ ಕಟಕ್ ನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ರೈಲಿನಲ್ಲಿ ಭುವನೇಶ್ವರದಿಂದ ಬೋದ್ ಗಯಾಗೆ ತೆರಳುತ್ತಿದ್ದರು. ಈ ವೇಳೆ ಒಡಿಶಾ ಪೊಲೀಸರ ಸಹಾಯದಿಂದ ಹಾಲಶ್ರೀಯನ್ನು ಬಂಧಿಸಲಾಗಿದೆ. ಇಂದು ರಾತ್ರಿ ಸಿಸಿಬಿ ಪೊಲೀಸರು ಬೆಂಗಳೂರಿಗೆ ಕರೆತರಲಿದ್ದಾರೆ.