ಬೆಂಗಳೂರು : – ಮನೆಗಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿ 6.60 ಲಕ್ಷ ರೂ. ಮೌಲ್ಯದ 132 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಯ ಬಂಧನದಿಂದ ಬಸವನಗುಡಿ, ಬನಶಂಕರಿ, ಮಲ್ಲೇಶ್ವರಂ ಪೊಲೀಸ್ ಠಾಣೆಗಳ ತಲಾ ಒಂದೊಂದು ಮನೆಗಳ್ಳತನ ಪ್ರಕರಣಗಳು ಪತ್ತೆಯಾಗಿವೆ.
ಬಸವನಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹೆಚ್ಚಾಗಿ ಮನೆಗಳ್ಳತನವಾಗಿದ್ದ ಬಗ್ಗೆ ದಾಖಲಾದ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಗೊಳಪಡಿಸಿ ಆತ ನೀಡಿದ ಮಾಹಿತಿ ಮೇರೆಗೆ 6.60 ಲಕ್ಷ ರೂ. ಮೌಲ್ಯದ 132 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡು ಮೂರು ಪ್ರಕರಣಗಳನ್ನು ಪತ್ತೆಹಚ್ಚಿದ್ದಾರೆ. ದಕ್ಷಿಣ ವಿಭಾಗದ ಉಪಪೊಲೀಸ್ ಆಯುಕ್ತ ರಾಹುಲ್ಕುಮಾರ್ ಶಹಾಪುರ್ವಾಡ್, ಜಯನಗರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ನಾರಾಯಣಸ್ವಾಮಿ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಸುಬ್ರಹ್ಮಣ್ಯಸ್ವಾಮಿ ಮತ್ತು ಸಿಬ್ಬಂದಿ ತಂಡ ಈ ಕಾರ್ಯಾಚರಣೆ ಕೈಗೊಂಡಿತ್ತು. ಈ ಉತ್ತಮ ಕಾರ್ಯವನ್ನು ಇಲಾಖೆಯ ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿದ್ದಾರೆ.