ಬೆಳಗಾವಿ: ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ಮೇಲೆ ದಾಳಿ ನಡೆಸಿದ ಲೋಕಾಯುಕ್ತರು ಡಿಡಿಪಿಐ ಅವರನ್ನು ಹಣ ಪಡೆಯುವಾಗ ವಶಕ್ಕೆ ಪಡೆದಿದ್ದಾರೆ. ವ್ಯಕ್ತಿಯೊಬ್ಬರಿಂದ ಸುಮಾರು 40 ಸಾವಿರ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತರಿಗೆ ಡಿಡಿಪಿಐ ನಲವತವಾಡ ಟ್ರ್ಯಾಪ್ ಆಗಿದ್ದಾರೆ.
ಲೋಕಾಯುಕ್ತರು ಕಚೇರಿ ಪರಿಶೀಲನೆ ಮುಂದುವರೆಸಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಕೆಲಸವನ್ನು ಲೋಕಾಯುಕ್ತ ಅಧಿಕಾರಿಗಳು ಮುಂದುವರಿಸಿದ್ದಾರೆ. ಪರವಾನಗಿ ನವೀಕರಣ ಮಾಡಿಕೊಡಲು 40 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಬೆಳಗಾವಿ ಡಿಡಿಪಿಐ ಬಸವರಾಜ್ ನಾಲತವಾಡ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತುರುಮುರಿ ಗ್ರಾಮದಲ್ಲಿರುವ ಬಸವೇಶ್ವರ ಶಿಕ್ಷಣ ಸಂಸ್ಥೆಯ ಪರವಾನಿಗೆ ನವೀಕರಣ ಮಾಡಿಕೊಡಲು ಡಿಡಿಪಿಐ ಬಸವರಾಜ್ ನಾಲತವಾಡ ಅವರು 40 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಡಿಡಿಪಿಐ ವಿರುದ್ಧ ಶಾಲೆ ಮುಖ್ಯಸ್ಥ ಅರ್ಜುನ ಕುರಿ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅದರಂತೆ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ನಡೆಸಿ ಬಸವರಾಜ್ ನಾಲತವಾಡ ಅವರನ್ನು ಲಂಚದ ಹಣದ ಸಹಿತ ವಶಕ್ಕೆ ಪಡೆದಿದ್ದಾರೆ.