ನವದೆಹಲಿ :ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಆಯೋಜಿಸಿದ ಭಾರತ್ ಜೋಡೋ ಯಾತ್ರೆ ವರ್ಷಾಚರಣೆ ಆಚರಿಸಲು ಕಾಂಗ್ರೆಸ್ ತಯಾರಿ ನಡೆಸಿದೆ. 2022ರ ಸೆಪ್ಟೆಂಬರ್ 7 ರಂದು ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ದರು. ಇದೀಗ 2023ರ ಸೆಪ್ಟೆಂಬರ್ 7 ರಂದು ದೇಶದ ಎಲ್ಲಾ ಜಿಲ್ಲೆಯಲ್ಲಿ ಭಾರತ್ ಜೋಡೋ ಯಾತ್ರೆ ಆಯೋಜಿಸಲು ಕಾಂಗ್ರೆಸ್ ಪ್ಲಾನ್ ಮಾಡಿದೆ. ಭಾರತ್ ಜೋಡೋ ವರ್ಷಾಚರಣೆ ಪ್ರಯುಕ್ತ ಕಾಂಗ್ರೆಸ್ ವಿಶೇಷ ಯಾತ್ರೆ ಹಮ್ಮಿಕೊಂಡಿದೆ. ಸೆಪ್ಟೆಂಬರ್ 7 ರಂದು ಸಂಜೆ 5 ಗಂಟೆಯಿಂದ 6 ಗಂಟೆ ವರೆಗೆ ಎಲ್ಲಾ ಜಿಲ್ಲೆಯಲ್ಲಿ ಭಾರತ್ ಜೋಡೋ ಯಾತ್ರೆ ನಡೆಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೇಳಿದ್ದಾರೆ.