ಕರ್ನಾಟಕ : ಆಗಸ್ಟ್ 21ರಿಂದ ಮೂರು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಎಲ್ಲೆಲ್ಲಿ?, ಇಲ್ಲಿದೆ ವಿವರ
ಕರ್ನಾಟಕ, ಆಗಸ್ಟ್, 20: ಈ ಬಾರಿ ರಾಜ್ಯಕ್ಕೆ ಮುಂಗಾರು ಆಗಮನ ವಿಳಂಬವಾಗಿತ್ತು. ಆದರೂ ಜುಲೈ ತಿಂಗಳಲ್ಲಿ ಅಬ್ಬರಿಸಿದ ಮಳೆರಾಯ ಆಗಸ್ಟ್ ಆರಂಭದಲ್ಲಿ ಸದ್ದಗಡಗಿತ್ತು. ಆದರೆ ಇದೀಗ ಮತ್ತೆ ಮುಂಗಾರು ಚುರುಕು ಪಡೆದಿದ್ದು, ಹಲವು ಜಿಲ್ಲೆಗಳಲ್ಲಿ ಅಬ್ಬರದ ಮಳೆಯಾಗುತ್ತಿದೆ. ಹಾಗೆಯೇ ಆಗಸ್ಟ್ 21ರಿಂದ ಮುಂದಿನ ಮೂರು ದಿನಗಳ ಕಾಲ ಮಳೆರಾಯನ ಆರ್ಭಟ ಹೆಚ್ಚಾಗುವ ಸಾಧ್ಯತೆಯಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇಂದು (ಆಗಸ್ಟ್ 20) ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಇಂದು ದಕ್ಷಿಣ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಆಗಸ್ಟ್ 21ರಿಂದ ಮೂರು ದಿನ ಕರಾವಳಿ ಜಿಲ್ಲೆಗಳಲ್ಲಿ ಮಳೆ ಆರ್ಭಟ ಹೆಚ್ಚಾಗಲಿದ್ದು, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆಗಸ್ಟ್ 20ರಂದು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ, ಆಗಸ್ಟ್ 21 ರಿಂದ 23ರವರೆಗೆ ಅತೀ ಸಾಧಾರಣ ಮಳೆ ಬೀಳಲಿದೆ ಎನ್ನುವ ಮಾಹಿತಿಯನ್ನು ನೀಡಿದೆ.