ಬೆಂಗಳೂರು : ಕಿದ್ವಾಯಿ ಆಸ್ಪತ್ರೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದೆತೆ ತನಿಖೆಗೆ ಆದೇಶಿಸಿ ಕಾರ್ಯದರ್ಶಿಗೆ ಸಿಎಂ ಟಿಪ್ಪಣಿ ಬರೆದಿದ್ದಾರೆ.
ಈ ಸಂಬಂಧ ಮಾತನಾಡಿದ ಅವರುಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಪೆಟ್ ಸ್ಕ್ಯಾನ್ ಖರೀದಿ, ಔಷಧ ಖರೀದಿ ಸೇರಿದಂತೆ ವಿವಿಧ ಟೆಂಡರ್ಗಳಲ್ಲಿ ನಡೆದಿರುವ ಅಕ್ರಮ ಹಾಗೂ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿ ನೇತೃತ್ವದಲ್ಲಿ ಮೂರು ಮಂದಿ ಸದಸ್ಯರ ತಂಡದಿಂದ ತನಿಖೆ ನಡೆಸಿ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಮಾಡಿದ್ದಾರೆ.
ವಂದಿತಾ ಶರ್ಮಾ ಅವರಿಗೆ ಟಿಪ್ಪಣಿ ಬರೆದಿರುವ ಅವರು, ಕಿದ್ವಾಯಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ, ಟೆಂಡರ್ ಹಾಗೂ ಔಷಧ ಖರೀದಿಯಲ್ಲಿ ಸಾಕಷ್ಟು ಅಕ್ರಮಗಳು ನಡೆದಿವೆ ಎಂಬ ವ್ಯಾಪಕ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಒಬ್ಬ ಐಎಎಸ್ ಅಧಿಕಾರಿ ನೇತೃತ್ವದಲ್ಲಿ ಉತ್ತಮ ಚಾರಿತ್ರ್ಯವುಳ್ಳ ಸಹಕಾರ ಇಲಾಖೆಯ ಒಬ್ಬ ಅಧಿಕಾರಿ ಹಾಗೂ ಆರ್ಥಿಕ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ತಂಡವನ್ನು ಕೂಡಲೇ ರಚನೆ ಮಾಡಿ. ಎರಡು ವಾರಗಳ ಒಳಗಾಗಿ ಪಾರದರ್ಶಕ ತನಿಖಾ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿದ್ದಾರೆ.