ಧಾರವಾಡ: ಅಪರಿಚಿತ ವಾಹನ ಡಿಕ್ಕಿಯಾಗಿ ಪೊಲೀಸ್ ಕಾನ್ಸ್ಟೇಬಲ್ವೊಬ್ಬರು ಸ್ಥಳದಲ್ಲೇ ಸಾನ್ನಪ್ಪಿರುವ ಘಟನೆ ಧಾರವಾಡ ಹೊರವಲಯದ ಇಟ್ಟಿಗಟ್ಟಿ ಬೈಪಾಸ್ನಲ್ಲಿ ಬುಧವಾರ ನಡೆದಿದೆ.
ಹುಚ್ಚೇಶ ಹಿರೇಗೌಡರ (37) ಮೃತ ಕಾನ್ಸ್ಟೇಬಲ್. ಬೈಕ್ ಹಿಂಬದಿ ಕುಳಿತಿದ್ದ ಮಹಿಳಾ ಕಾನ್ಸ್ಟೇಬಲ್ ಲಕ್ಷ್ಮೀ ಎಂಬುವರು ಗಂಭೀರ ಗಾಯಗೊಂಡಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್ಗೆ ರವಾನಿಸಲಾಗಿದೆ. ಛಬ್ಬಿ ಗಣೇಶೋತ್ಸವ ಬಂದೋಬಸ್ತ್ ಕರ್ತವ್ಯ ಮುಗಿಸಿಕೊಂಡು ಬೈಕ್ನಲ್ಲಿ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.