ಬೆಂಗಳೂರು : ಕರ್ನಾಟಕದಲ್ಲಿ ‘ರಾಷ್ಟ್ರೀಯ ಶಿಕ್ಷಣ ನೀತಿ’ ಮುಂದುವರೆಸಲ್ಪ ಹಳೆಯ ಶಿಕ್ಷಣ ನೀತಿಯನ್ನೇ ಮುಂದುವರೆಸಲಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆಶಿ ಕರ್ನಾಟಕದಲ್ಲಿ ‘ರಾಷ್ಟ್ರೀಯ ಶಿಕ್ಷಣ ನೀತಿ’ ಮುಂದುವರೆಸಲ್ಲ ಹಳೆಯ ಶಿಕ್ಷಣ ನೀತಿಯನ್ನೇ ಮುಂದುವರೆಸಲಿದ್ದೇವೆ, ರಾಜ್ಯ ಸರ್ಕಾರ ಹೊಸ ಶಿಕ್ಷಣ ಪಾಲಿಸಿ ತರಲು ಸಮಿತಿ ರಚನೆ ಮಾಡಲಿದೆ. ರಾಜ್ಯದಲ್ಲಿ ಹಳೆಯ ಶಿಕ್ಷಣ ನೀತಿಯನ್ನೇ ಮುಂದುವರೆಸಲಾಗುತ್ತದೆ, ಹೊಸ ‘ರಾಷ್ಟ್ರೀಯ ಶಿಕ್ಷಣ ನೀತಿ’ ಮುಂದುವರೆಸಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಭೆ ನಡೆಸಿದ್ದು, ಗುಣಮಟ್ಟದ ಶಿಕ್ಷಣ ಕೊಡುವುದರಲ್ಲಿ ಲೋಪವಾಗಬಾರದು ಎಂದು ವಿವಿಯ ಕುಲಪತಿಗಳ ಸಭೆಯಲ್ಲಿ ಸಿದ್ದರಾಮಯ್ಯ ಸೂಚನೆ ನೀಡಿದರು.ಸಭೆ ಬಳಿಕ ಡಿಸಿಎಂ ಡಿಕೆಶಿ ಮಾತನಾಡಿದರು. ರಾಷ್ಟ್ರೀಯ ಶಿಕ್ಷಣ ನೀತಿ (NEP) ರದ್ದು ಕುರಿತಂತೆ ಚರ್ಚೆ ನಡೆಸಲು ಇಂದು ಸಿಎಂ ಸಿದ್ದರಾಮಯ್ಯ ಅವರು ಶಿಕ್ಷಣ ತಜ್ಞರು ಹಾಗೂ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.