ಬೆಂಗಳೂರು : ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ಮೋದಿ ಇದೀಗ ಕೆಂಪೇಗೌಡ ಏರ್ ಪೋರ್ಟ್ ಗೆ ಬಂದಿಳಿದಿದ್ದಾರೆ. ಪ್ರಧಾನಿ ಮೋದಿಗೆ ಡಿಸಿಎಂ ಡಿಕೆ ಶಿವಕುಮಾರ್, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ , ಮಾಜಿ ಸಿಎಂ ಡಿವಿ ಸದಾನಂದ ಗೌಡ ಮತ್ತಿತರರು ಸ್ವಾಗತ ಕೋರಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಏರ್ ಪೋರ್ಟ್ ಗೆ ವಿಶೇಷ ವಿಮಾನದ ಮೂಲಕ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ. ಕೆಲವೇ ಹೊತ್ತಿನಲ್ಲಿ ಪ್ರಧಾನಿ ಮೋದಿ ಬಿ.ಮಾರೇನಹಳ್ಳಿಗೆ ಭೇಟಿ ನೀಡಲಿದ್ದಾರೆ.
ಪ್ರಧಾನಿ ಮೋದಿ ಬೆಂಗಳೂರಲ್ಲಿ ಹೊಸ ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ (ಬಿಐಇಟಿಸಿ) ಕ್ಯಾಂಪಸ್ ಅನ್ನು ಉದ್ಘಾಟಿಸಲಿದ್ದಾರೆ.