ಚಿತ್ರದುರ್ಗ : ಚಿತ್ರದುರ್ಗದ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಧರ್ಮೇಂದರ್ ಕುಮಾರ್ ಮೀನಾ ಶನಿವಾರ ಅಧಿಕಾರ ಸ್ವೀಕರಿಸಿದರು.
ನಗರದ ಎಸ್.ಪಿ. ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಹಿಂದಿನ ಎಸ್.ಪಿ ಆಗಿದ್ದ ಕೆ. ಪರುಶುರಾಮ ಅವರು ಅಧಿಕಾರ ಹಸ್ತಾಂತರಿಸಿ ಶುಭ ಕೋರಿದರು.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ನೂತನ ಎಸ್.ಪಿ. ಜಿಲ್ಲೆಯಲ್ಲಿ ಕ್ರಿಮಿನಲ್ ಚಟುವಟಿಕೆ ತಡೆಗಟ್ಟುವುದು, ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣಕ್ಕೆ ಕ್ರಮವಹಿಸಲಾಗುತ್ತದೆ. ಅಪಘಾತಗಳ ತಡೆಗೆ ಕ್ರಮ ಕೈಗೊಳ್ಳಲಾಗುತ್ತದೆ.
ಪೊಲೀಸರ ಜನಸ್ನೇಹಿಯಾಗಿರುಲು ಕ್ರಮ ಕೈಗೊಂಡು ಎಲ್ಲರ ಸಹಕಾರದೊಂದಿಗೆ ಉತ್ತಮ ಕೆಲಸ ಮಾಡುವುದು ನಮ್ಮ ಉದ್ದೇಶವಾಗಿದೆ ಎಂದರು.