ವಿಜಯಪುರ: ಕೌಟುಂಬಿಕ ಕಲಹ ಹಿನ್ನಲೆ ಪತ್ನಿ ಹಾಗೂ ಪತ್ನಿಯ ತಾಯಿ ಕೊಲೆಗೈದಿರುವ ಘಟನೆ ವಿಜಯಪುರ ನಗರದ ನವಬಾಗ್ದಲ್ಲಿ ನಡೆದಿದೆ. ರೂಪಾ ಮೇತ್ರಿ (32), ಕಲ್ಲವ್ವ (55) ಕೊಲೆಯಾದವರು.
ಇನ್ನು ಮಲ್ಲಿಕಾರ್ಜುನ ಮೇತ್ರಿ ಕೊಲೆಗೈದಿರುವ ಆರೋಪಿ. ರೂಪಾ ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲವಂತೆ ಹಾಗೂ ಮನೆಯಲ್ಲಿ ಕೆಲಸ ಮಾಡುತ್ತಿರಲಿಲ್ಲವಂತೆ. ಇದರಿಂದ ರೋಸಿ ಹೋಗಿದ್ದ ಮಲ್ಲಿಕಾರ್ಜುನ ಮಲಗಿದ್ದ ವೇಳೆ ಕಟ್ಟಿಗೆಯಿಂದ ತಲೆಗೆ ಹೊಡೆದು ಪತ್ನಿ ಹಾಗೂ ಅತ್ತೆಯನ್ನು ಕೊಲೆ ಮಾಡಿದ್ದಾನೆ ಎಂದು ಮಾಹಿತಿ ಲಭ್ಯವಾಗಿದೆ. ಕೊಲೆಗೈದ ಬಳಿಕ ಗಾಂಧಿಚೌಕ್ ಪೊಲೀಸ್ ಠಾಣೆಗೆ ತೆರಳಿ ಮಲ್ಲಿಕಾರ್ಜುನ ಶರಣಾಗಿದ್ದಾನೆ.
ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.