ಬೆಂಗಳೂರು : ಮಾಜಿ ಸಚಿವ, ಹಾಲಿ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಸಕ್ಕರೆ ಕಾರ್ಖಾನೆಗೆ 232 ಕೋಟಿ ರೂ. ಸಾಲ ಪಡೆದು ವಂಚಿಸಿದ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲು ಪೊಲೀಸರು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ವಂಚನೆ ಪ್ರಕರಣ ಸಂಬಂಧ ರಮೇಶ್ ಜಾರಕಿಹೊಳಿ ಸೇರಿದಂತೆ ಮೂವರ ವಿರುದ್ಧ ನಗರದ ವಿ.ವಿ. ಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಸಿಐಡಿಗೆ ವರ್ಗಾಯಿಸಲು ಪೊಲೀಸರು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ರಮೇಶ್ ಜಾರಕಿಹೊಳಿ ಅವರು ಬೆಳಗಾವಿಯ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಲಿಮಿಟೆಡ್ ಸಕ್ಕರೆ ಕಾರ್ಖಾನೆಯ ಸ್ಥಾಪನೆ, ವಿಸ್ತರಣೆ ಹಾಗೂ ನಿರ್ವಹಣೆಗಾಗಿ 2013 ರಿಂದ 2017 ರವರಗೆ ಕರ್ನಾಟಕ ರಾಜ್ಯ ಸಹಕಾಋಿ ಅಪೆಕ್ಸ್ ಬ್ಯಾಂಕ್ ಮತ್ತು ಅದರ ಸಮೂಹ ಬ್ಯಾಂಕ್ ಗಳಿಂದ ಸಾಲ ಪಡೆದು ಬಳಿಕ ಹಿಂದಿರುಗಿಸದೆ ವಂಚಿಸಿದ್ದಾರೆ ಎಂದು ಆರೋಪಿಸಿ ರಾಜ್ಯ ಸಹಕಾರಿ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ರಾಜಣ್ಣ ಅವರು ವಿ.ವಿ. ಪುರ ಠಾಣೆಗೆ ದೂರು ನೀಡಿದ್ದಾರೆ.