ಯಾದಗಿರಿ : ಮಾಜಿ ಸಚಿವ ಬಿ.ಶ್ರೀರಾಮುಲು ಯಾವುದೇ ಅಪರೇಷನ್ ಕಮಲ ಮಾಡುವುದಿಲ್ಲ. ದೇವರಲ್ಲಿ ಪ್ರಾರ್ಥಿಸುತ್ತೇನೆ ಐದು ವರ್ಷ ಕಾಂಗ್ರೆಸ್ ಸರ್ಕಾರ ಅಧಿಕಾರ ಪೊರೈಸಲಿ ಎಂಬ ಅಚ್ಚರಿ ಹೇಳಿಕೆ ನೀಡಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆ ಯಲ್ಲಿ ಕಾಂಗ್ರೆಸ್ ಪಕ್ಷ 136 ಸೀಟ್ ಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದಿದೆ. ಇದರಿಂದಾಗಿ ಸಿಎಂ ಸಿದ್ದರಾಮಯ್ಯ ನೇತ್ರತ್ವದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳನ್ನು ಹಿಡೇರಿಸುವ ಕೆಲಸ ಮಾಡಲಾಗ್ತಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಅಪರೇಷನ್ ಟಾಕ್ ಪೈಟ್ ಜೋರಾಗಿಯೇ ನಡೆಯುತ್ತಿದೆ. ಆದರೆ ಮಾಜಿ ಸಚಿವ ಬಿ.ಶ್ರೀರಾಮುಲು ಯಾದಗಿರಿಯಲ್ಲಿ ಮಾತನಾಡಿ, ಕಾಂಗ್ರೆಸ್ ಗೆ ರಾಜ್ಯದ ಜನ ಸ್ಪಷ್ಟ ಬಹುಮತದ ಸರ್ಕಾರ ನೀಡಿದ್ದಾರೆ. 136 ಕಾಂಗ್ರೆಸ್ ಶಾಸಕರನ್ನು ಜನ ಆಯ್ಕೆ ಮಾಡಿದ್ದಾರೆ. ನಮ್ಮ ಅಭ್ಯಂತರ ಏನೂ ಇಲ್ಲ. ಬಿಜೆಪಿ ಯಾವುದೇ ಅಪರೇಷನ್ ಕಮಲ ಮಾಡುವುದಿಲ್ಲ. ಅಪರೇಷನ್ ಕಮಲದ ಮೂಲಕ ಸರ್ಕಾರ ಕೆಡವಲಾಗ್ತಿದೆ ಅಂತ ಸುಮ್ಮನೆ ಹೇಳುತ್ತಿದ್ದಾರೆ. ಇದೆಲ್ಲಾ ಕೇವಲ ಊಹಾಪೋಹ ಅಂತ ಸ್ಪಷ್ಟಪಡಿಸಿದರು.