ಬೆಂಗಳೂರು : ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಸಿ.ಎಂ.ಇಬ್ರಾಹಿಂ ಅವರನ್ನ ಕೂಡಲೇ ಜಾರಿಗೆ ಬರುವಂತೆ ಜಾತ್ಯತೀತ ಜನತಾದಳ ಪಕ್ಷದಿಂದ ಅಮಾನತು ಮಾಡಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ ದೇವೇಗೌಡ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ ದೇವೇಗೌಡ, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಹಿನ್ನೆಲೆಯಲ್ಲಿ ಪಕ್ಷದ ಹಿಂದಿನ ರಾಜ್ಯಾಧ್ಯಕ್ಷರಾದ ಸಿ.ಎಂ. ಇಬ್ರಾಹಿಂ ಅವ್ರನ್ನ ಈ ಕೂಡಲೇ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತ್ತುಗೊಳಿಸಲಾಗಿದೆ” ಎಂದಿದ್ದಾರೆ.